ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾನನ್ನು ದೆಹಲಿಯಲ್ಲಿ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಡ್ರಗ್ಸ್ ದಂಧೆಯ ಕಿಂಗ್ ಪಿನ್ ಎಂದು ಹೇಳಲಾಗಿರುವ ವೀರೇನ್ ಖನ್ನಾ ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಓದಿದ್ದು, ಪಾರ್ಟಿಗಳನ್ನು ಆಯೋಜಿಸಿ ನಟಿಯರು, ಶ್ರೀಮಂತರ ಮಕ್ಕಳನ್ನು ಕರೆಸುತ್ತಿದ್ದ. ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ.
ಡ್ರಗ್ಸ್ ನಂಟಿನ ತನಿಖೆ ಮುಂದುವರೆಸಿರುವ ಸಿಸಿಬಿಯ ಇಬ್ಬರು ಇನ್ಸ್ ಪೆಕ್ಟರ್ ಗಳು ವೀರೇನ್ ಖನ್ನಾನನ್ನು ಬಂಧಿಸಿದ್ದು, ವಿಚಾರಣೆಗಾಗಿ 4 ದಿನ ಕಸ್ಟಡಿಗೆ ಪಡೆಯಲಾಗಿದೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ನಟಿ ರಾಗಿಣಿ, ಆಪ್ತ ರವಿಶಂಕರ್ ಅವರನ್ನು ಬಂಧಿಸಿದ್ದಾರೆ.