alex Certify ಸೂರ್ಯಗ್ರಹಣ ಹಿನ್ನೆಲೆ: ಮಕ್ಕಳನ್ನು ನೆಲದಲ್ಲಿ ಕುತ್ತಿಗೆ ಮಟ್ಟಕ್ಕೆ ಹೂಳುವುದು ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೂರ್ಯಗ್ರಹಣ ಹಿನ್ನೆಲೆ: ಮಕ್ಕಳನ್ನು ನೆಲದಲ್ಲಿ ಕುತ್ತಿಗೆ ಮಟ್ಟಕ್ಕೆ ಹೂಳುವುದು ನಿಷೇಧ

ಕಲಬುರಗಿ: ಜೂನ್ 21 ರ ಇಂದು ಸೂರ್ಯಗ್ರಹಣ ಪ್ರಯುಕ್ತ ಮೂಢನಂಬಿಕೆ ಹಿನ್ನೆಲೆಯಲ್ಲಿ ವಿಕಲಚೇತನ ಮಕ್ಕಳನ್ನು ನೆಲದಲ್ಲಿ ಕುತ್ತಿಗೆಯ ಮಟ್ಟಕ್ಕೆ ಹೂಳುವುದನ್ನು ಸಿ.ಆರ್.ಪಿ.ಸಿ. ಕಾಯ್ದೆ 1973ರ ಕಲಂ 133 ರನ್ವಯ ನಿಷೇಧಿಸಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

ಭಾನುವಾರ ಸಂಭವಿಸುವ ಸೂರ್ಯಗ್ರಹಣ ಸಮಯದಲ್ಲಿ ಮೂಢನಂಬಿಕೆಯಿಂದ ವಿಕಲಚೇತನ ಮಕ್ಕಳನ್ನು ಜಿಲ್ಲೆಯಾದ್ಯಂತ ಭೂಮಿಯಲ್ಲಿ ಹೂಳದಂತೆ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿ ಸಾರ್ವಜನಿಕರು ಯಾರಾದರು ವಿಕಲಚೇತನ ಮಕ್ಕಳನ್ನು ಭೂಮಿಯಲ್ಲಿ ಹೂಳಿದಲ್ಲಿ ಅಂತವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಅವೈಜ್ಞಾನಿಕವಾದ ಹೂಳುವ ರೂಢಿಯನ್ನು ಕೈಬಿಡಬೇಕು. ಕಳೆದ ವರ್ಷದ ಕಲಬುರಗಿ ನಗರದ ತಾಜ ಸುಲ್ತಾನಪೂರದಲ್ಲಿ ಇದೇ ರೀತಿಯ ಪ್ರಕರಣ ವರದಿಯಾಗಿದ್ದು, ಜಿಲ್ಲಾಡಳಿತದ ಗಮನಕ್ಕಿದೆ. ಭಾನುವಾರ ನಡೆಯುವ ಸೂರ್ಯಗ್ರಹಣ ದಿನದಂದು ಯಾವುದೇ ಕಾರಣಕ್ಕೂ ಇದು ಮರುಕಳಿಸಬಾರದೆಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ತಹಶೀಲ್ದಾರರಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...