alex Certify ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿಗಳ ಶಾಲಾ ಶುಲ್ಕ ಹೆಚ್ಚಳ ಮಾಡದಂತೆ ಖಾಸಗಿ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಮುಂದಿನ ಶೈಕ್ಷಣಿಕ ವರ್ಷದ ಶುಲ್ಕವನ್ನು ಹೆಚ್ಚಳ ಮಾಡದಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈಗ ಇರುವ ಶಾಲಾ ಶುಲ್ಕವನ್ನು ಮುಂದುವರೆಸಬೇಕು ಅಥವಾ ಕಡಿಮೆ ಶುಲ್ಕ ಪಡೆಯಬೇಕು ಎಂದು ಶಿಕ್ಷಣ ಇಲಾಖೆಯಿಂದ ಖಾಸಗಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ.

ಪ್ರತಿವರ್ಷ ಶೇಕಡ 15 ರಷ್ಟು ಶುಲ್ಕ ಏರಿಕೆ ಮಾಡಲು ಅವಕಾಶ ಇತ್ತು. ಈಗ ಶುಲ್ಕ ಹೆಚ್ಚಳ ಮಾಡದೇ ಪೋಷಕರ ಇಚ್ಛೆಯಂತೆ ಶುಲ್ಕ ಪಡೆದುಕೊಳ್ಳಲು ಸೂಚನೆ ನೀಡಲಾಗಿದೆ. ಮಾಸಿಕ, ತ್ರೈಮಾಸಿಕ, ಅರ್ಧ ವಾರ್ಷಿಕ ಕಂತು ಅಥವಾ ವರ್ಷದ ಶುಲ್ಕವನ್ನು ಒಂದೇ ಬಾರಿ ಪಾವತಿಸಲು ಅವಕಾಶ ಕಲ್ಪಿಸಿ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...