alex Certify ಶಾಲಾ ಮಕ್ಕಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಂದು ಗುಡ್ ನ್ಯೂಸ್: ಅ. 12 ರಿಂದ ಸಂವೇದ ಪಾಠ ಸರಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಂದು ಗುಡ್ ನ್ಯೂಸ್: ಅ. 12 ರಿಂದ ಸಂವೇದ ಪಾಠ ಸರಣಿ

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಸಂವೇದ ಇ-ಕ್ಲಾಸ್ ಪಾಠ ಸರಣಿಯ ಎರಡನೆ ಅವಧಿ ಅ.12 ರಿಂದ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಅವಧಿಯಲ್ಲಿ 5,6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲಿಷ್, ತೃತೀಯ ಭಾಷೆ ಹಿಂದಿ, ಕನ್ನಡ ಮಾಧ್ಯಮದಲ್ಲಿ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ವಿಡಿಯೋ ಪಾಠಗಳು DSERT Jnanadeepa ಮತ್ತು Makkalavani ಯುಟ್ಯೂಬ್ ಚಾನೆಲ್‍ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಇಷ್ಟರಲ್ಲಿಯೇ ಈ ತರಗತಿಗಳು ದೂರದರ್ಶನದ ಚಂದನ ವಾಹಿನಿಯಲ್ಲಿಯೂ ಮರುಪ್ರಸಾರಗೊಳ್ಳಲಿವೆ.

2020-21ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಚಟುವಟಿಕೆಗಳನ್ನು ಆರಂಭಿಸಬೇಕಾಗಿದೆಯಾದರೂ ಕೋವಿಡ್-19ರ ಪ್ರಸರಣದಿಂದಾಗಿ ಸದ್ಯದ ಪರಿಸ್ಥಿತಿಯಲ್ಲಿ ಅದು ಸಾಧ್ಯವಿಲ್ಲವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ದೂರದರ್ಶನ ಚಂದನವಾಹಿನಿಯಿಂದ ಪ್ರತಿ ದಿನ 4 ಘಂಟೆ ಅವಧಿಯಲ್ಲಿ ಪ್ರಥಮ ಹಂತದಲ್ಲಿ ಪ್ರೌಢಶಾಲೆಯ 8 ರಿಂದ 10 ನೆಯ ತರಗತಿಯ ಮಕ್ಕಳಿಗೆ ವಿಡಿಯೋ ಪಾಠ ತಯಾರಿಸಿ ಪ್ರಸಾರ ಮಾಡಲಾಗುತ್ತಿದ್ದು, ಸಮಯ ಲಭ್ಯತೆ ಆಧಾರದಲ್ಲಿ ಉಳಿದ ತರಗತಿಗಳ ಪಾಠ ಪ್ರಸಾರವು ಆಗಲಿದೆ ಎಂದು ಅವರು ಹೇಳಿದ್ದಾರೆ.

ಇಲಾಖೆಯ ಎಲ್ಲಾ ಹಂತದ ಶಿಕ್ಷಕರು, ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಯೂಟ್ಯೂಬ್‍ಗಳಲ್ಲಿ ಮಕ್ಕಳು ಪಾಠ ವೀಕ್ಷಿಸುವಂತೆ ಗಮನಹರಿಸಿ ಮೇಲ್ವಿಚಾರಣೆ ಮಾಡಲು ಸೂಚಿಸಿದೆ. ಪೋಷಕರು ಮಕ್ಕಳು ಪಾಠ ವೀಕ್ಷಿಸಲು ಪ್ರೋತ್ಸಾಹಿಸಿ ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಸುರೇಶ್ ಕುಮಾರ್ ಕೋರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...