alex Certify ಅಭ್ಯರ್ಥಿ ಹಾಕದಂತೆ ಒತ್ತಡ: ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ HDK ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಭ್ಯರ್ಥಿ ಹಾಕದಂತೆ ಒತ್ತಡ: ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ HDK ವಾಗ್ದಾಳಿ

ಬೆಂಗಳೂರು: ಆರ್. ಆರ್. ನಗರ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಕಾಂಗ್ರೆಸ್ ನಿಂದ ಒತ್ತಡ ಹೇರಲಾಗಿದೆ. ಇದಕ್ಕೆ ಮಣಿಯುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಪಕ್ಷದಲ್ಲಿದ್ದ ಹನುಮಂತರಾಯಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ಬೆಂಬಲದೊಂದಿಗೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಷರತ್ತು ಇಟ್ಟು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಹನುಮಂತರಾಯಪ್ಪ ಅವರ ಪುತ್ರಿ ಕುಸುಮಾ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಹೇಳಿದ್ದಾರೆ.

ಜಾತಿ ಹೆಸರು ಹೇಳಿಕೊಂಡು ನಾವು ಮತ ಕೇಳುವುದಿಲ್ಲ. ಆದರೆ, ಕಾಂಗ್ರೆಸ್ ಜಾತಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದು, ಅವರ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...