alex Certify BIG BREAKING: ಪ್ರತಿಷ್ಠೆಯ RR ನಗರ, ಶಿರಾ ಉಪ ಚುನಾವಣೆಗೆ ಮತದಾನ ಶುರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪ್ರತಿಷ್ಠೆಯ RR ನಗರ, ಶಿರಾ ಉಪ ಚುನಾವಣೆಗೆ ಮತದಾನ ಶುರು

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ಪ್ರತಿಷ್ಠೆಯ ಚುನಾವಣೆ ಇದಾಗಿದೆ. ಕಳೆದ ಚುನಾವಣೆಯಲ್ಲಿ ಆರ್.ಆರ್. ನಗರದಲ್ಲಿ ಕಾಂಗ್ರೆಸ್, ಶಿರಾದಲ್ಲಿ ಜೆಡಿಎಸ್ ಜಯಗಳಿಸಿದ್ದು ಆಡಳಿತರೂಢ ಬಿಜೆಪಿಗೆ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ.

ಕ್ಷೇತ್ರಗಳನ್ನು ಉಳಿಸಿಕೊಳ್ಳುವ ಸವಾಲು ಪಕ್ಷಗಳ ಮುಂದಿದೆ. ಗೆಲುವಿಗೆ ಎಲ್ಲಾ ರೀತಿಯ ಕಾರ್ಯತಂತ್ರ ರೂಪಿಸಿರುವ ನಾಯಕರು ಮತದಾರರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 15 ದಿನಗಳಿಂದ ಭರ್ಜರಿ ಪ್ರಚಾರ ನಡೆಸಲಾಗಿತ್ತು. ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಮತದಾರರ ಸೆಳೆಯಲು ಕೊನೆಕ್ಷಣದವರೆಗೂ ಗೆಲುವಿಗೆ ಕಾರ್ಯತಂತ್ರ ರೂಪಿಸಲಾಗಿದೆ. ಇವತ್ತು ಮತದಾರರು ಅಭ್ಯರ್ಥಿಗಳ ಹಣೆಬರಹ ಬರೆಯಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...