
ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಮೂರು ಪಕ್ಷಗಳ ಅಭ್ಯರ್ಥಿಗಳು ಸಜ್ಜಾಗಿದ್ದಾರೆ.
ಈಗಾಗಲೇ ಕೆಲ ಅಭ್ಯರ್ಥಿಗಳು ಪ್ರಚಾರ ಆರಂಭಿಸಿದ್ದು ಬಿಜೆಪಿ, ಜೆಡಿಎಸ್ ನಿಂದಲೂ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ. ರಾಜೇಶ್ ಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಕಣದಲ್ಲಿದ್ದಾರೆ.
ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿಯಾಗಿ ಹೆಚ್. ಕುಸುಮಾ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಕಣದಲ್ಲಿದ್ದಾರೆ. ಕಾಂಗ್ರೆಸ್ ಮೊದಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ಪ್ರಚಾರ ಕೈಗೊಂಡಿದೆ.
ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಳಂಬವಾಗಿ ಪ್ರಕಟವಾಗಿದ್ದು ಇವತ್ತಿನಿಂದ ಪ್ರಚಾರ ಭರಾಟೆ ಜೋರಾಗಲಿದೆ. ಇನ್ನು ಜೆಡಿಎಸ್ ಅಮ್ಮಾಜಮ್ಮ ಅವರನ್ನು ಅಭ್ಯರ್ಥಿಯಾಗಿ ಮೊದಲೇ ಘೋಷಿಸಿತ್ತು. ಆರ್.ಆರ್. ನಗರಕ್ಕೆ ಕೃಷ್ಣಮೂರ್ತಿ ಹೆಸರನ್ನು ಘೋಷಣೆ ಮಾಡಿದೆ.