ಬೆಂಗಳೂರು: ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಾತ್ಕಾಲಿಕವಾಗಿ ಬಯೋಮೆಟ್ರಿಕ್ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ವಿನಾಯಿತಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ.
ಅಧಿಕಾರಿಗಳು, ಸಿಬ್ಬಂದಿ ಹಾಜರಾತಿ ಪುಸ್ತಕದಲ್ಲಿ ಹಾಜರಾತಿಯನ್ನು ನಿರ್ವಹಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ.
ರಾಜ್ಯದಲ್ಲಿ ಕೊರೋನಾ ಸೋಂಕು ಆತಂಕ ಮೂಡಿಸಿದ ಹಿನ್ನೆಲೆಯಲ್ಲಿ ಬಯೋಮೆಟ್ರಿಕ್ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳಿಗೆ ಮೇ 31ರವರೆಗೆ ಬಯೋಮೆಟ್ರಿಕ್ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ.