alex Certify ಬಡವರ ʼBPLʼ ಕಾರ್ಡ್ ಹೊಂದಿದ ನೌಕರರಿಗೆ ಶಾಕಿಂಗ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಡವರ ʼBPLʼ ಕಾರ್ಡ್ ಹೊಂದಿದ ನೌಕರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಸರ್ಕಾರ ಮತ್ತು ಸರ್ಕಾರದ ನಿಗಮ, ಮಂಡಳಿಯ ಕೆಲವು ಅಧಿಕಾರಿಗಳು, ನೌಕರರು ಬಿಪಿಎಲ್ ಪಡಿತರ ಚೀಟಿಯನ್ನು ಪಡೆದು ಉಪಯೋಗಿಸುತ್ತಿದ್ದು, ಅದನ್ನು ವಾಪಸ್ ಮಾಡಬೇಕೆಂದು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಸರ್ಕಾರದ ನಿಗಮ –ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಗಳ ಕೆಲವು ಅಧಿಕಾರಿಗಳು, ನೌಕರರು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡಲಾಗುವ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡು ಸರ್ಕಾರದಿಂದ ಬಡವರಿಗೆ ನೀಡುವ ಸೌಲಭ್ಯವನ್ನು ಪಡೆಯುತ್ತಿದ್ದಾರೆ.

ಸರ್ಕಾರಿ ನೌಕರರು ಸರ್ಕಾರದಿಂದ ವೇತನ ಭತ್ಯೆಗಳನ್ನು ಪಡೆಯುವುದರಿಂದ ಬಡತನ ರೇಖೆಗಿಂತ ಕೆಳಗಿನನವರಿಗೆ ನೀಡಲಾಗುವ ಬಿಪಿಎಲ್ ಕಾರ್ಡ್ ಪಡೆಯುವುದು ಅಕ್ಷಮ್ಯವಾಗುತ್ತದೆ. ಯಾವುದೇ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರು ಬಿಪಿಎಲ್ ಪಡಿತರ ಚೀಟಿ ಹೊಂದಿದ್ದರೆ ಅದನ್ನು ಒಂದು ತಿಂಗಳ ಒಳಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಹಿಂತಿರುಗಿಸಿ ರದ್ದುಪಡಿಸಿಕೊಳ್ಳಬೇಕೆಂದು ತಿಳಿಸಲಾಗಿದೆ.

1 ತಿಂಗಳ ನಂತರವೂ ಪಡಿತರ ಚೀಟಿಯನ್ನು ಹೊಂದಿರುವುದು ಕಂಡು ಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಶಿಸ್ತು ಕ್ರಮ ಜರುಗಿಸಲಾಗುವುದು. ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...