
ಶಿವಮೊಗ್ಗ: ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಭಾಳ್ಕರ್ ಅವರ ಪುತ್ರ ಮೃಣಾಲ್ ಹಾಗೂ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಸಹೋದರ ಶಿವಕುಮಾರ್ ಪುತ್ರಿ ಹಿತಾ ಅವರ ನಿಶ್ಚಿತಾರ್ಥ ಸಮಾರಂಭ ನಗರದ ಸರ್ಜಿ ಕನ್ವೆನ್‍ಷನ್ ಹಾಲ್‍ನಲ್ಲಿ ಇಂದು ನಡೆಯಿತು.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಶಾಸಕರಾದ ಆಯನೂರು ಮಂಜುನಾಥ್, ಬಿ.ಕೆ.ಸಂಗಮೇಶ್ವರ್ ಮೊದಲಾದವರು ಭಾಗವಹಿಸಿ ಶುಭ ಹಾರೈಸಿದ್ದಾರೆ.