alex Certify ಶಾಲಾ ಮಕ್ಕಳು, ಪೋಷಕರಿಗೆ ಸರ್ಕಾರದಿಂದ ‘ಸಿಹಿ ಸುದ್ದಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳು, ಪೋಷಕರಿಗೆ ಸರ್ಕಾರದಿಂದ ‘ಸಿಹಿ ಸುದ್ದಿ’

ಬೆಂಗಳೂರು: 1000 ಉಭಯ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಿ ಸಬಲೀಕರಣಗೊಳಿಸುವ ಉದ್ದೇಶದಿಂದ ಈ ವರ್ಷ ರಾಜ್ಯದಲ್ಲಿ 1000 ಉಭಯ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುವುದು. ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಳ ಮಾಡಲಾಗುವುದು. ಜಾಗತಿಕ ನಿರೀಕ್ಷೆಗೆ ತಕ್ಕಂತೆ ಮಕ್ಕಳನ್ನು ರೂಪಿಸಲು ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದಲ್ಲಿ ಬೋಧನೆ ಮಾಡುವುದು ಇದರ ಉದ್ದೇಶವಾಗಿದೆ. ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮಗಳ ಪಠ್ಯ ಇರಲಿದ್ದು 2 ಮಾಧ್ಯಮಗಳಲ್ಲಿಯೂ ಬೋಧನೆ ಮಾಡಲಾಗುವುದು ಎಂದು ಹೇಳಲಾಗಿದೆ.

1000 ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್ ಕಲಿಸುತ್ತಿದ್ದು ಅದನ್ನು ಇನ್ನೂ 1000 ಶಾಲೆಗೆ ವಿಸ್ತರಣೆ  ಮಾಡಲಾಗುವುದು. 400 ಉರ್ದು ಮಾಧ್ಯಮ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಕಲಿಕೆಗೆ ವ್ಯವಸ್ಥೆ ಮಾಡಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...