ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೋನಾ ಸೋಂಕಿತರ ಚಿಕಿತ್ಸೆಯ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಂಡಿದೆ.
ಕೊರೋನಾ ಸೋಂಕಿತರೊಬ್ಬರ ಚಿಕಿತ್ಸೆಗೆ ಸುಮಾರು 3.50 ಲಕ್ಷ ರೂಪಾಯಿ ಖರ್ಚಾಗುತ್ತದೆ. ಬೆಂಗಳೂರಿನ ವೈದ್ಯಕೀಯ ಕಾಲೇಜಿನಲ್ಲಿ ಕೊರೋನಾ ಚಿಕಿತ್ಸೆಗಾಗಿ 4.74 ಕೋಟಿ ರೂಪಾಯಿ ಖರ್ಚಾಗಿದೆ. ಈ ಆಸ್ಪತ್ರೆಯಲ್ಲಿ 136 ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದ್ದು ಪ್ರತಿಯೊಬ್ಬ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಲು ಸಮಾರು 3.48 ಲಕ್ಷ ರೂಪಾಯಿ ಖರ್ಚಾಗಿದೆ.
ಪ್ರತಿ ಕೊರೋನಾ ಸೋಂಕಿತನ ಚಿಕಿತ್ಸೆಗೆ ಎಷ್ಟು ಖರ್ಚು ಮಾಡಲಾಗುತ್ತಿದೆ ಎಂಬುದರ ಕುರಿತಾಗಿ ಫೇಸ್ಬುಕ್ ಲೈವ್ ನಲ್ಲಿ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಮೆಡಿಕಲ್ ಕಾಲೇಜ್ ನಲ್ಲಿ ಇದುವರೆಗೆ 136 ಕೊರೋನಾ ಸೋಂಕಿತರ ಚಿಕಿತ್ಸೆಗೆ 4.74 ಕೋಟಿ ರೂಪಾಯಿ ಖರ್ಚಾಗಿದೆ. ಅಲ್ಲಿಗೆ ಪ್ರತಿ ಸೋಂಕಿತರಿಗೆ 3,48,885 ರೂಪಾಯಿ ಆಗುತ್ತದೆ ಎಂದು ಹೇಳಲಾಗಿದೆ.