alex Certify ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಮನೆ ಬಾಗಿಲಿಗೆ ಪಶುಸಂಜೀವಿನಿ ಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಮನೆ ಬಾಗಿಲಿಗೆ ಪಶುಸಂಜೀವಿನಿ ಯೋಜನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ಪಶುಸಂಜೀವಿನಿ ಯೋಜನೆ ಲೋಕಾರ್ಪಣೆಗೊಳಿಸಿದ್ದಾರೆ.

ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಇದನ್ನು ಜಾರಿಗೆ ತರಲಾಗುತ್ತಿದ್ದು ಜಾನುವಾರಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದ್ದು ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ. ಈ ಸೇವೆಗಳನ್ನು ಇಲಾಖೆಯ  ಹೆಲ್ಪಲೈನ್ ಸೇವೆಗಳಿಗೆ ಲಿಂಕ್ ಮಾಡಿ  24 X 7 ಜಾನುವಾರುಗಳ ರಕ್ಷಣೆಗೆ ಉದ್ದೇಶಿಸಲಾಗಿದೆ.

2019-20 ನೇ ಸಾಲಿನ ಬಜೆಟ್ ಘೋಷಣೆಯ 2 ಕೋಟಿ ರೂ. ಅನುದಾನ ಮತ್ತು ಇಲಾಖೆಯ ಇತರೆ ಅನುದಾನದಲ್ಲಿ  ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಸುಸಜ್ಜಿತ ಆಂಬ್ಯುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಾದ ಶಸ್ತ್ರ ಚಿಕಿತ್ಸಾ ಘಟಕ, ಪ್ರಯೋಗಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆ ಮಾಡಲಾಗಿದೆ. 250 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್,    200 ಕೆ.ಜಿ. ತೂಕ ಸಾಮರ್ಥ್ಯದ ಶಸ್ತ್ರ ಚಿಕಿತ್ಸಾ ಟೇಬಲ್, AC ವ್ಯವಸ್ಥೆ, ಪಶುವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆಯಿದೆ.

ವಾಶ್ ಬೇಸಿನ್, 100 w Led light, ಆಮ್ಲಜನಕ ಸಪೋರ್ಟ್ ಸಿಸ್ಟಮ್ ಅಳವಡಿಕೆ, ಆಕಸ್ಮಿಕ ಬೆಂಕಿ ಅನಾಹುತ ನಿವಾರಣೆ (fire extinguisher) ಇದೆ. ಶಸ್ತ್ರಚಿಕಿತ್ಸಾ ಉಪಕರಣಗಳ ಕಿಟ್(surgical kit), ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್(PM kit), ಪ್ರಸೂತಿ ಕಿಟ್(dystocia kit) ಗಳ ಪೆಟ್ಟಿಗೆಗಳು ಮತ್ತು ಇತರೆ ಉಪಕರಣಗಳನ್ನು ಇಡಲು ಕಪಾಟುಗಳ ವ್ಯವಸ್ಥೆ ಇತ್ಯಾದಿಗಳನ್ನು ಒದಗಿಸುವುದರ ಮೂಲಕ  ಜಾನುವಾರುಗಳಿಗೆ ಅವಶ್ಯಕ ಹಾಗೂ ತುರ್ತು ಚಿಕಿತ್ಸೆ ಸೌಲಭ್ಯ ನೀಡಲಾಗುತ್ತದೆ.

ಮನೆ ಬಾಗಿಲಿಗೆ ಪಶು ಆಸ್ಪತ್ರೆ(ಚಿಕಿತ್ಸಾ ವಿವರ)

ಸಾಮಾನ್ಯವಾಗಿ ಜಾನುವಾರುಗಳಲ್ಲಿ ಎದುರಾಗುವ ಅರೋಗ್ಯ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸ ಬೇಕಾದ ಅನಿವಾರ್ಯತೆ ಇರುತ್ತದೆ. ವಿಷಪ್ರಾಶನ, ಪ್ರಸವಕ್ಕೆ ಸಂಭಂಧಿಸಿದ ತೊಂದರೆಗಳು, ಹೊಟ್ಟೆ ಉಬ್ಬರ, ಉಸಿರುಗಟ್ಟುವುದು, ಅಪಘಾತ, ಮೂಳೆಮುರಿತ, ಬೆಬೇಸಿಯೋಸಿನ್, ಆಂಥ್ರಾಕ್ಸ್, ಚಪ್ಪೆರೋಗ, ಗಳಲೇ ರೋಗ, ಹಾಲುಜ್ವರ, ಕೆಚ್ಚಲು ಬಾವು, ವಿವಿಧ ರೋಗೊದ್ರೇಕಗಳು ಹಾಗೂ ಇನ್ನಿತರೆ ಆರೋಗ್ಯ ಸಮಸ್ಯೆಗಳಿಗೆ ಜಾನುವರುಗಳನ್ನು ವಾಹನದಲ್ಲಿ ಹಾಕಿಕೊಂಡು ಹೋಗಿ ಚಿಕಿತ್ಸೆ ಪಡೆಯುವ ಸಮಸ್ಯೆಗಳಿಗೆ ಪರಿಹಾರ ದೊರಕಲಿದೆ.

ಮೂಕರೋಧನೆ ತಪ್ಪಿಸಲು ರೈತರ ಮನೆ ಬಾಗಿಲಿಗೆ ತೆರಳಿ ತಜ್ಞ ಪಶುವೈದ್ಯರು ಹಾಗೂ ಸುಸಜ್ಜಿತ ಪಶು ಚಿಕಿತ್ಸಾ ವಾಹನ ದನ, ಎಮ್ಮೆ, ಕುರಿ, ಮೇಕೆ, ಹಾಗೂ ಇನ್ನಿತರೆ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ಪ್ರಾಣ ಹಾನಿ ಆಗುವುದನ್ನು ತಡೆಗಟ್ಟಿ ರೈತರಿಗೆ ಎದುರಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸಲಿವೆ.

ಜಿಲ್ಲಾದ್ಯಂತ ವಾರದಲ್ಲಿ 1 ದಿನ ಪಶುವೈದ್ಯಕೀಯ ಶಸ್ತ್ರ ಚಿಕಿತ್ಸಾ ತಜ್ಞರು ಮತ್ತು ಪ್ರಸೂತಿ ತಜ್ಞರು ಚಿಕಿತ್ಸಾ ಶಿಬಿರ ಮತ್ತು ಅನುಪಾಲನಾ ಶಿಬಿರಗಳಲ್ಲಿ ಭಾಗವಹಿಸಿ ಪಶುವೈದ್ಯಕೀಯ ಸೇವೆಯನ್ನು ನೀಡಲಿದ್ದಾರೆ.

ರಾಜ್ಯದ 15 ಜಿಲ್ಲೆಗಳಲ್ಲಿ ಕಾರ್ಯಾರಂಭ

ಜಿಲ್ಲೆಗಳ ವಿವರ: ರಾಯಚೂರು, ಕಲುಬುರ್ಗಿ, ಧಾರವಾಡ, ಬಿಜಾಪುರ, ಬೆಳಗಾವಿ, ಮಂಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ಚಿತ್ರದುರ್ಗ, ಯಾದಗಿರಿ, ಬೀದರ್, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಪಶುವೈದ್ಯಕೀಯ  ಪಾಲಿಕ್ಲಿನಿಕ್‌ಗಳಿಗೆ ನೀಡಲಾಗುತ್ತಿದೆ. ಸದ್ಯ ರಾಜ್ಯದ 15 ಜಿಲ್ಲೆಗಳಲ್ಲಿ ಕಾರ್ಯಾರಂಭ ಮಾಡಲಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಈ ಸೇವೆಯನ್ನು ವಿಸ್ತರಿಸಲಾಗುತ್ತದೆ.

ಸಹಾಯವಾಣಿ

ಪಶುಪಾಲಕರ ಸಹಾಯವಾಣಿ ಸಂಖ್ಯೆ 1962 ಸಂಯೋಜಿಸಿ ಅವಶ್ಯಕ ಮತ್ತು ತುರ್ತು ಸೇವೆ ನೀಡಲು ಕ್ರಮವಹಿಸಲಾಗುತ್ತಿದೆ.

ಪಶು ಶಸ್ತ್ರಚಿಕಿತ್ಸಾ ವಾಹನವನ್ನು ಉಪಯೋಗಿಸಿಕೊಂಡು ಜಿಲ್ಲೆಯಾದ್ಯಂತ ವಾರದಲ್ಲಿ 1 ದಿನ ಪಶುವೈದ್ಯಕೀಯ ಶಸ್ರ್ತಚಿಕಿತ್ಸಾ ತಜ್ಞರು ಮತ್ತು ಪ್ರಸೂತಿ ತಜ್ಞರು ಬರಡುರಾಸುಗಳ ಚಿಕಿತ್ಸಾ ಶಿಬಿರ ಮತ್ತು ಅನುಪಾಲನಾ ಶಿಬಿರಗಳಲ್ಲಿ ಭಾಗವಹಿಸಿ ತಜ್ಞ ಪಶುವೈದ್ಯಕೀಯ ಸೇವೆಯನ್ನು ದೊರಕಿಸಿಕೊಡುವರು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...