ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ 2020-21 ನೇ ಸಾಲಿನ ರಾಷ್ಟ್ರೀಯ ತೊಟಗಾರಿಕೆ ಮಿಷನ್ ಯೋಜನೆಯಡಿ ಕಂದು ಮತ್ತು ಅಂಗಾಂಶ ಬಾಳೆ ಪ್ರದೇಶ ವಿಸ್ತರಣೆ, ಕೋಕೋ ಬೆಳೆ ಪ್ರದೇಶ ವಿಸ್ತರಣೆ, ನೀರು ಸಂಗ್ರಹಣಾ ಘಟಕ, ಪ್ಯಾಕ್ಹಾ ಸ್ವತ್ತು ಈರುಳ್ಳಿ ಸಂಗ್ರಹಣಾ ಘಟಕ ನಿರ್ಮಾಣ, ಮಾವು ಮತ್ತು ಕಾಳುಮೆಣಸು ಪುನಶ್ಚೇಚತನ, ಜೇನು ಕೃಷಿ ಹಾಗೂ ಇನ್ನಿತರೇ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ.
ಆಸಕ್ತ ರೈತರು ಜುಲೈ 2 ರಿಂದ 15 ರವರೆಗೆ ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್, ಪಾಸ್‍ಪೊರ್ಟ್ ಅಳತೆಯ ಫೋಟೊಗಳೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಹರಿಹರ ಇಲ್ಲಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕಾ ಅಧಿಕಾರಿಗಳನ್ನು ಸಂರ್ಪಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಪಂ ಹರಿಹರ ಇವರು ತಿಳಿಸಿದ್ದಾರೆ.