ಬೆಂಗಳೂರು: ರೈತರಿಗಾಗಿ 1000 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. 50 ಲಕ್ಷ ರೈತರಿಗೆ ತಲಾ ಎರಡು ಸಾವಿರ ರೂ. ನೀಡಲಾಗುತ್ತಿದೆ. ರೈತರಿಗೆ ಹಣ ನೀಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕೊರೋನಾದಿಂದಾಗಿ ರಾಜ್ಯದಲ್ಲಿ ಹಣಕಾಸು ಸ್ಥಿತಿ ಸರಿ ಇಲ್ಲ. ಹೀಗಿದ್ದರೂ ರೈತರಿಗಾಗಿ ಹಣ ಬಿಡುಗಡೆ ಮಾಡಲಾಗಿದೆ. ಸಂಕಷ್ಟದಲ್ಲಿ ರೈತರು ನೆಮ್ಮದಿಯಾಗಿ ಇರಬೇಕು ಎಂದು ಸಿಎಂ ತಿಳಿಸಿದ್ದಾರೆ.
ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ 1000 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, 4000 ರೂ. ಪೈಕಿ 2 ಸಾವಿರ ರೂಪಾಯಿಯ ಎರಡನೇ ಕಂತು ನೀಡಲಾಗುತ್ತಿದೆ. ಇದರಿಂದ 50 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.