ಶಿವಮೊಗ್ಗ: ಲಾಕ್ಡೌನ್ ಜಾರಿಯಾಗಿದ್ದರಿಂದ ಸಂಕಷ್ಟದಲ್ಲಿದ್ದ ಮುಸುಕಿನ ಜೋಳ ಬೆಳೆದ ರೈತರಿಗೆ 5000 ರೂ. ಆರ್ಥಿಕ ನೆರವು ನೀಡಲಾಗುವುದು. ಅರ್ಜಿ ಸಲ್ಲಿಕೆಗೆ ಆಗಸ್ಟ್ 31 ಕೊನೆಯ ದಿನವಾಗಿದೆ.
2019 -20 ನೇ ಸಾಲಿನ ಬೆಳೆ ತಂತ್ರಾಂಶದಲ್ಲಿ ಮುಸುಕಿನ ಜೋಳ ಬೆಳೆ ದಾಖಲಾದ ರೈತರ ಪಟ್ಟಿಯನ್ನು ಗ್ರಾಮ ಪಂಚಾಯಿತಿ ಕಚೇರಿ ನಾಮಫಲಕದಲ್ಲಿ ಪ್ರದರ್ಶಿಸಲಾಗಿದೆ. ಆಗಸ್ಟ್ 31ರೊಳಗೆ ರೈತರು ಅರ್ಜಿ ಸಲ್ಲಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಎಫ್ಐಡಿ ಸಂಖ್ಯೆ ಹೊಂದಿರದ ರೈತರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಜಮೀನಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪುಸ್ತಕದ ನಕಲು ಪ್ರತಿ ಒದಗಿಸಿ ಎಫ್ಐಡಿ ಸಂಖ್ಯೆ ಪಡೆದುಕೊಳ್ಳಬೇಕು. ಒಪ್ಪಿಗೆ ಪತ್ರ ಪಡೆದು ನೋಟರಿಯಿಂದ ದೃಢೀಕರಿಸಿ ಅರ್ಜಿ ಸಲ್ಲಿಸಬೇಕು.
ರೈತರು ಮರಣ ಹೊಂದಿದಲ್ಲಿ ಮಾತ್ರ ಗ್ರಾಮಲೆಕ್ಕಿಗರಿಂದ ಉತ್ತರಾಧಿಕಾರಿ ಪ್ರಮಾಣಪತ್ರ ಪಡೆದು ಕುಟುಂಬದ ಸದಸ್ಯರ ನಿರಾಕ್ಷೇಪಣಾ ಪತ್ರದೊಂದಿಗೆ ಅರ್ಜಿ ಸಲ್ಲಿಸತಕ್ಕದ್ದು. ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.