ಕೊಪ್ಪಳ: ಮುಂಗಾರು ಹಂಗಾಮಿಗೆ ಈಗಾಗಲೇ ಬಹುತೇಕ ಕಡೆ ಬಿತ್ತನೆ ಮುಗಿದಿದ್ದು, ಮತ್ತೆ ಕೆಲವೆಡೆ ಬಿತ್ತನೆ ಆರಂಭವಾಗಿದೆ. ಈಗಾಗಲೇ ಅನೇಕ ಕಡೆ ಬಿತ್ತನೆ ಕಾರ್ಯ ಮುಗಿದಿದ್ದು ರೈತರಿಗೆ ಅಗತ್ಯವಾದ ಗೊಬ್ಬರ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.
ಮುಂಗಾರು ಹಂಗಾಮಿಗೆ ಯೂರಿಯಾ ಕೊರತೆ ಇಲ್ಲವೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ರಾಜ್ಯದಲ್ಲಿ ಯೂರಿಯಾ ಗೊಬ್ಬರದ ಕೊರತೆ ಇಲ್ಲ. ಕೆಲವು ಕಡೆಗಳಲ್ಲಿ ವ್ಯಾಪಾರ ಆಗುತ್ತಿಲ್ಲ. ದಾಸ್ತಾನು ಖಾಲಿಯಾದ ನಂತರ ಗೊಬ್ಬರ ಪೂರೈಕೆ ಕ್ರಮಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ಗೊಬ್ಬರ ಬಳಕೆ ಮಾಡದಂತೆ ಸೂಚನೆ ನೀಡಿದೆ. ಇದರಿಂದ ಭೂಮಿ ಬರಡಾಗುತ್ತದೆ. ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯವಿರುವಷ್ಟು ಗೊಬ್ಬರ ದಾಸ್ತಾನು ಇದೆ ಎಂದು ಹೇಳಿದ್ದಾರೆ