ದಾವಣಗೆರೆ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ದಾವಣಗೆರೆಯಲ್ಲಿ ಬೆಂಗಳೂರು –ಪುಣೆ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಬೆಳಗಿನ ಜಾವ ಟೈಯರ್ ಗೆ ಬೆಂಕಿ ಹಚ್ಚಿದ ರೈತರು ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ರೈತ ವಿರೋಧಿ ಕಾಯ್ದೆ ಜಾರಿಗೆ ತರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತ, ದಲಿತ, ಕಾರ್ಮಿಕರ ಐಕ್ಯ ಹೋರಾಟ ಸಮಿತಿ ಕರೆ ನೀಡಿರುವ ಹೆದ್ದಾರಿ ಬಂದ್ ಗೆ ರಾಜ್ಯದ ಹಲವು ಕಡೆಗಳಲ್ಲಿ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರು, ದಾವಣಗೆರೆ ಮೊದಲಾದ ಕಡೆಗಳಲ್ಲಿ ರೈತರು ಪ್ರತಿಭಟನೆ ನಡೆಸಿ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.