
ಬೀದರ್: ರಾಜ್ಯದಲ್ಲಿ ಪ್ರವಾಹದಿಂದ ಆಗಿರುವ ಹಾನಿ ಪರಿಶೀಲನೆಗೆ ಕೇಂದ್ರ ಅಧ್ಯಯನ ತಂಡ ಆಗಮಿಸಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವತಿಯಿಂದ ಈ ಕುರಿತಾಗಿ ಮನವಿ ಮಾಡಿದ್ದು ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಕೆ.ಬಿ. ಪ್ರತಾಪ ನೇತೃತ್ವದ ಅಧಿಕಾರಿಗಳ ತಂಡ ನೆರೆ ಹಾನಿ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದು ಹೇಳಿದ್ದಾರೆ.
ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ಸಲ್ಲಿಸಲಿದೆ. ಈ ತಂಡಕ್ಕೆ ರಾಜ್ಯದಲ್ಲಿ ಆದ ಹಾನಿ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಬೆಳೆ ಹಾನಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡಲು ಹಣಕಾಸಿನ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.