alex Certify ರಾಜ್ಯದ ಜನತೆಗೆ ಕೇಂದ್ರ ಸರ್ಕಾರದಿಂದ ‘ಶುಭ ಸುದ್ದಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಕೇಂದ್ರ ಸರ್ಕಾರದಿಂದ ‘ಶುಭ ಸುದ್ದಿ’

ಬೆಂಗಳೂರು: ರಾಜ್ಯಕ್ಕೆ ಪ್ರಸಕ್ತ ಏಪ್ರಿಲ್‌ ನಿಂದ ಜೂನ್‍ ವರೆಗೆ ಮೂರು ತಿಂಗಳ ಕಾಲ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ಪ್ರತಿ ತಿಂಗಳಿಗೆ 2.1 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳನ್ನು ನಿಗದಿಪಡಿಸಲಾಗಿದೆ. ಇದನ್ನು 4.01 ಕೋಟಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿನ (ಎನ್‌ಎಫ್‌ಎಸ್‌ಎ) ಫಲಾನುಭವಿಗಳಿಗೆ ಉಚಿತವಾಗಿ ವಿತರಿಸಲಾಗುವುದು.

ರಾಜ್ಯದ ಜನರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ಒದಗಿಸಲು 2351 ಕೋಟಿ ರೂಪಾಯಿಗಳ ಒಟ್ಟು ವೆಚ್ಚವನ್ನು ಭಾರತ ಸರ್ಕಾರ ಭರಿಸುತ್ತಿದೆ. ರಾಜ್ಯ ಸರ್ಕಾರ ಈ ಯೋಜನೆಯಡಿ 1735 ಕೋಟಿ ರೂ. ಮೌಲ್ಯದ 4.45 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳನ್ನು ಮೇ 7 ರವರೆಗೆ ಎತ್ತುವಳಿ ಮಾಡಿದೆ.

ಲಾಕ್ ಡೌನ್ ಆದಾಗಿನಿಂದ ರಾಜ್ಯ 302 ರೈಲು ಲೋಡ್ ಅಂದರೆ 8.03 ಲಕ್ಷ ಮೆಟ್ರಿಕ್ ಟನ್ ತೂಕದ ಆಹಾರ ಧಾನ್ಯಗಳನ್ನು ಸ್ವೀಕರಿಸಿದೆ ಎಂದು ಭಾರತ ಆಹಾರ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಿ.ವಿ.ಪ್ರಸಾದ್ ಮಾಹಿತಿ ನೀಡಿದ್ದಾರೆ.

ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮತ್ತು ಸಾಮಾನ್ಯ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ರಾಜ್ಯದ ಅಗತ್ಯತೆಗಳನ್ನು ಪೂರೈಸಲು ಇದುವರೆಗೆ ಪ್ರತಿದಿನ 7.48 ಲಕ್ಷ ಚೀಲಗಳನ್ನು ಸ್ವೀಕೃತಿ ವಿತರಣೆಯನ್ನು ಮಾಡಿದೆ. ಇದೇ ಅವಧಿಯಲ್ಲಿ, ಎನ್‌ಎಫ್‌ಎಸ್‌ಎ ಅಡಿಯಲ್ಲಿ ರಾಜ್ಯ ಸರ್ಕಾರವು 2.54 ಎಲ್‌ಎಂಟಿ ಆಹಾರ ಧಾನ್ಯಗಳನ್ನು ಸಹ ಎತ್ತುವಳಿ ಮಾಡಿದೆ. ವಿವಿಧ ಯೋಜನೆಗಳ ಅಡಿಯಲ್ಲಿ ವಿತರಣೆಗಾಗಿ ಲಾಕ್ ಡೌನ್ ಅವಧಿಯಲ್ಲಿ ಕರ್ನಾಟಕಕ್ಕೆ ಭಾರತ ಸರ್ಕಾರ ಪೂರೈಸಿದ ಒಟ್ಟು ಆಹಾರ ಧಾನ್ಯಗಳ ಪ್ರಮಾಣ 8.51 ಲಕ್ಷ ಮೆಟ್ರಿಕ್ ಟನ್. ಇದು ಸುಮಾರು 1.70 ಕೋಟಿ ಚೀಲಗಳ 50 ಕೆಜಿ ಪ್ಯಾಕಿಂಗ್ ಆಗಿದೆ.

ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ನೀಡಲಾದ ಎಲ್ಲಾ ಆಹಾರ ಧಾನ್ಯಗಳನ್ನು ರಾಜ್ಯ ಸರ್ಕಾರವು ಸಮಯಕ್ಕೆ ಎತ್ತುವಳಿ ಮಾಡುವಂತೆ ನೋಡಿಕೊಳ್ಳುವುದರಿಂದ ರಾಜ್ಯದಲ್ಲಿ ಆಹಾರ ಧಾನ್ಯಗಳ ಸಮರ್ಪಕ ಲಭ್ಯತೆ ಇರುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...