ಬಾಗಲಕೋಟೆ: ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಗೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು ಗುಡುಗಿದ್ದಾರೆ.
ಬಾಗಲಕೋಟೆಯಲ್ಲಿ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಲೋಕಸೇವಾ ಆಯೋಗದ ವಿರುದ್ಧ ಕಿಡಿ ಕಾರಿದ್ದಾರೆ.
ನಾವು ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದೆವು. ಪರೀಕ್ಷೆಗೆ ಒಂದು ದಿನ ಮೊದಲು ಹೀಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದರೆ ಹೇಗೆ? ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿತ್ತು. ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೆ ಹೀಗೆ ಪ್ರಶ್ನೆ ಪತ್ರಿಕೆ ಲೀಕ್ ಆಗುತ್ತಿರಲಿಲ್ಲ, ಇದು ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗಿರುವ ಘಟನೆ ಎಂದು ವಾಗ್ದಾಳಿ ನಡೆಸಿದ್ದಾರೆ.