alex Certify FDA ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಏಳಲ್ಲ 14 ಲೀಕಾಸುರರ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

FDA ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಏಳಲ್ಲ 14 ಲೀಕಾಸುರರ ಬಂಧನ

ಬೆಂಗಳೂರು: ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 14 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಉಳ್ಳಾಲದ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು ಚಂದ್ರು ಎಂಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಚಂದ್ರು ಬಂಧನದ ಬೆನ್ನಲ್ಲೇ ಇದೀಗ ಒಟ್ಟು 14 ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರಿಂದ 35 ಲಕ್ಷ ನಗದು, 1 ಎರ್ಟಿಗಾ ಕಾರು, 1 ಬೊಲೆರೋ ಕಾರನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಆರೋಪಿಗಳು ಆನ್ ಲೈನ್ ಮೂಲಕ ಜಿಲ್ಲಾವಾರು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರುವ ಕುರಿತಾಗಿಯೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...