ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಬೋಧನಾ ಶುಲ್ಕ ಹೆಚ್ಚಿಸಿದರೆ ಕ್ರಮಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.
ರಾಜ್ಯದ ಖಾಸಗಿ ಅನುದಾನ ರಹಿತ ಶಾಲೆಗಳು 2020 -21ನೇ ಶೈಕ್ಷಣಿಕ ಸಾಲಿನಲ್ಲಿ ಬೋಧನಾ ಶುಲ್ಕ ಹೆಚ್ಚಿಸಬಾರದು ಎಂದು ಹೇಳಿದ್ದು, ಆದೇಶ ಉಲ್ಲಂಘಿಸಿದ ಶಾಲಾ ಆಡಳಿತ ಮಂಡಳಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ಕೊರೋನಾ ಲಾಕ್ಡೌನ್ ನಿಂದಾಗಿ ಆರ್ಥಿಕ ಚಟುವಟಿಕೆಗಳು ಸ್ತಬ್ಧವಾಗಿ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದಾಗಿ ಬೋಧನಾ ಶುಲ್ಕ ಹೆಚ್ಚಳ ಮಾಡಬಾರದು ಎಂದು ಆಡಳಿತ ಮಂಡಳಿಗಳಿಗೆ ನಿರ್ದೇಶನ ನೀಡುವಂತೆ ಪೋಷಕರು ಸರ್ಕಾರಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಸುತ್ತೋಲೆ ಹೊರಡಿಸಿ ಬೋಧನಾ ಶುಲ್ಕ ಹೆಚ್ಚಳ ಮಾಡಬಾರದು ಎಂದು ಸೂಚನೆ ನೀಡಿದೆ.