ಬೆಂಗಳೂರು: ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿಯಲ್ಲಿ ‘ಬಿಗ್ ಬಾಸ್’ ವಿನ್ನರ್, ನಟ ಪ್ರಥಮ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಥಮ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಎಸ್.ಡಿ.ಪಿ.ಐ. ಜಿಲ್ಲಾ ಸಮಿತಿ ಸದಸ್ಯ ಉಮರ್ ಫಾರೂಕ್ ಅವರು ದೂರು ನೀಡಿದ್ದು, ಈ ದೂರಿನ ಅನ್ವಯ ಎಫ್ಐಆರ್ ದಾಖಲಿಸಲಾಗಿದೆ.
ಕೆಜಿ ಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ್ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದು, ಸಮುದಾಯವನ್ನು ಅವಹೇಳನ ಮಾಡುವಂತೆ ಇದೆ ಎಂದು ಪೋಸ್ಟ್ ಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಪೋಸ್ಟ್ ಡಿಲಿಟ್ ಮಾಡಿದ್ದ ಪ್ರಥಮ್ ತಮಗೆ ಬೆದರಿಕೆ ಹಾಕಿದವರ ವಿರುದ್ಧ ದೂರು ನೀಡುವುದಾಗಿ ಹೇಳಿದ್ದರು. ಇದಾದ ನಂತರದಲ್ಲಿ ಅವರ ವಿರುದ್ಧ ದೂರು ನೀಡಲಾಗಿದ್ದು, ಎಫ್ಐಆರ್ ದಾಖಲಿಸಲಾಗಿದೆ.