ಮಂಡ್ಯದ ಅರ್ಕೇಶ್ವರ ದೇವಾಲಯದಲ್ಲಿ ಮೂವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡಿನ ದಾಳಿ ನಡೆಸಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು – ಮಳವಳ್ಳಿ ರಸ್ತೆಯ ಸಾದೊಳಲು ಗೇಟ್ ಬಳಿ ಆರೋಪಿಗಳ ಮೇಲೆ ಫೈರಿಂಗ್ ಮಾಡಲಾಗಿದೆ. ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ಕಲ್ಲು, ಚಾಕುವಿನಿಂದ ಹಲ್ಲೆ ನಡೆಸಿದ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ.
ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಫೈರಿಂಗ್ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು ಘಟನೆಯಲ್ಲಿ ಎಸ್ಐ ಹಾಗೂ ಇಬ್ಬರು ಕಾನ್ಸ್ ಟೇಬಲ್ ಗಳು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.