alex Certify ವೃದ್ಧ ದಂಪತಿ ಕೊಲೆ ಆರೋಪಿ ಮೇಲೆ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೃದ್ಧ ದಂಪತಿ ಕೊಲೆ ಆರೋಪಿ ಮೇಲೆ ಫೈರಿಂಗ್

ಹಾಸನದ ಜಿಲ್ಲೆಯಲ್ಲಿ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಆರೋಪಿ ಪ್ರಸಾದ್ ಅಲಿಯಾಸ್ ಗುಂಡನ ಮೇಲೆ ಅಣ್ಣೇನಹಳ್ಳಿಯಲ್ಲಿ ಫೈರಿಂಗ್ ಮಾಡಲಾಗಿದೆ. ಅಣ್ಣೇನಹಳ್ಳಿಯಲ್ಲಿ ಕೊಲೆ ಆರೋಪಿ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬಂಧನಕ್ಕೆ ತೆರಳಿದ್ದಾರೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಅಣ್ಣೇನಹಳ್ಳಿಯಲ್ಲಿ ಬೇಲೂರು ಠಾಣೆಯ ಪೊಲೀಸರು ಬಂಧನಕ್ಕೆ ಮುಂದಾದಾಗ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಗೆ ಯತ್ನಿಸಿ ಇನ್ಸ್ ಪೆಕ್ಟರ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ.

ಶರಣಾಗುವಂತೆ ಸೂಚಿಸಿದರೂ ಪರಾರಿಯಾಗಲು ಮುಂದಾದಾಗ ಸಿಪಿಐ ಸಿದ್ದರಾಮಪ್ಪ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಾಳು ಇನ್ಸ್ ಪೆಕ್ಟರ್ ವಿನಯ್ ಅವರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಪ್ರಸಾದ್ ಅಲಿಯಾಸ್ ಗುಂಡನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...