
ಬೈಕ್ ನಲ್ಲಿ ಬಂದಿದ್ದ ಮೂವರು ಏಕಾಏಕಿ ರೌಡಿ ಶೀಟರ್ ಮೇಲೆ ಗುಂಡಿನ ದಾಳಿ ನಡೆಸಿದ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಧಾರವಾಡದ ರೌಡಿ ಶೀಟರ್ ಇರ್ಫಾನ್ ಮೇಲೆ ಫೈರಿಂಗ್ ಮಾಡಲಾಗಿದೆ. ಹಳೆ ಹುಬ್ಬಳ್ಳಿಯ ಅಲ್ ತಾಜ್ ಹೋಟೆಲ್ ಬಳಿ ಘಟನೆ ನಡೆದಿದೆ. ಫೈರಿಂಗ್ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಾಯಾಳು ರೌಡಿಶೀಟರ್ ಇರ್ಪಾನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃಪಟ್ಟಿದ್ದಾನೆನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.