ಮಂಗಳೂರು: ಮೀನುಗಾರರಿಗೆ ಕ್ಯೂಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್ ಗಳನ್ನು ಕಡ್ಡಾಯಗೊಳಿಸಲು ತೀರ್ಮಾನಿಸಲಾಗಿದೆ ಎಂದು ಬಂದರು, ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕರಾವಳಿ ಮೀನುಗಾರಿಕೆ ಕುರಿತ ಸಂವಾದದಲ್ಲಿ ಮಾತನಾಡಿದ ಅವರು, ಸುರಕ್ಷತೆ ದೃಷ್ಟಿಯಿಂದ ಮೀನುಗಾರರಿಗೆ ಕ್ಯೂಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್ ಗಳನ್ನು ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಕ್ಯೂಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಮೀನುಗಾರಿಕೆ ಇಲಾಖೆ ಇಲಾಖೆಯಿಂದ ಜಿಲ್ಲಾಮಟ್ಟದಲ್ಲಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಕರಾವಳಿ ಕಾವಲು ಪಡೆಗೆ ಶೇಕಡ 20ರಷ್ಟು ಮೀನುಗಾರರನ್ನು ಆಯ್ಕೆ ಮಾಡುವಂತೆ ಸಿಎಂ ಬಳಿ ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಸಂವಾದ ಉದ್ಘಾಟಿಸಿದ ಸಂಸತ್ ಸದಸ್ಯ ನಳಿನ್ ಕುಮಾರ್ ಕಟೀಲ್ ಮಾತನಾಡಿ. ಕುಳಾಯಿಯಲ್ಲಿ ಒಂದು ವರ್ಷದ ಅವಧಿಯಲ್ಲಿ ಮೀನುಗಾರಿಕಾ ಜೆಟ್ಟಿ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.