alex Certify ಸಾಲ ಮನ್ನಾ: ಮತ್ತೊಂದು ಸಿಹಿ ಸುದ್ದಿ ಕೊಟ್ಟ ಯಡಿಯೂರಪ್ಪ ‘ಸರ್ಕಾರ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲ ಮನ್ನಾ: ಮತ್ತೊಂದು ಸಿಹಿ ಸುದ್ದಿ ಕೊಟ್ಟ ಯಡಿಯೂರಪ್ಪ ‘ಸರ್ಕಾರ’

ಬೆಂಗಳೂರು: ಮೀನುಗಾರರ ಸಾಲ ಮನ್ನಾ ಮಾಡಲು ರಾಜ್ಯ ಸರ್ಕಾರ 60 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸುಮಾರು 23,000 ಮೀನುಗಾರರ ಸಾಲ ಮನ್ನಾಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ 60 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಒಂದು ವರ್ಷದಿಂದ ಮೀನುಗಾರರ ಸಾಲ ಮನ್ನಾ ಬಾಬ್ತು ಹಣವನ್ನು ಬಿಡುಗಡೆ ಮಾಡುವ ಮೂಲಕ ಕೊರೋನಾ ಲಾಕ್ ಡೌನ್ ಸಂಕಷ್ಟದ ಸಮಯದಲ್ಲಿ ಮೀನುಗಾರರಿಗೆ ಅನುಕೂಲ ಮಾಡಿಕೊಡಲಾಗಿದೆ.

ಮೀನುಗಾರರು ಪಡೆದಿರುವ ಸಾಲಕ್ಕೆ ಪ್ರಮಾಣ ಪತ್ರ ಸಲ್ಲಿಕೆಯಾದ ಬಳಿಕ ಬ್ಯಾಂಕುಗಳಿಗೆ ಹಣ ಪಾವತಿ ಮಾಡಲಾಗುವುದು. ಬಂದರು ಮತ್ತು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೀನುಗಾರರ ಸಾಲ ಮನ್ನಾಕ್ಕೆ ಹಣ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಧನ್ಯವಾದ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...