ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಕೇಂದ್ರ ನೆರೆ ಅಧ್ಯಯನ ತಂಡ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಿದೆ.
ಇದಕ್ಕೆ ಪೂರ್ವಭಾವಿಯಾಗಿ ನಿನ್ನೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಅಧ್ಯಯನ ತಂಡ ಭೇಟಿಯಾಗಿ ಸಮಾಲೋಚನೆ ನಡೆಸಿದೆ.
ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಕೆ.ವಿ. ಪ್ರತಾಪ್ ಅವರ ನೇತೃತ್ವದ ಅಧಿಕಾರಿಗಳ ತಂಡ ಸಿಎಂ, ಸಚಿವರನ್ನು ಭೇಟಿ ಮಾಡಿ ಹಾನಿ ಮಾಹಿತಿ ಪಡೆದುಕೊಂಡಿದೆ. 8071 ಕೋಟಿ ರೂ. ನಷ್ಟು ನೆರೆ ಹಾನಿ ಉಂಟಾಗಿದ್ದು 4 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದೆ. ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರಕ್ಕೆ ಸಿಎಂ ತಿಳಿಸಿದ್ದು ಮಾರ್ಗಸೂಚಿ ಪರಿಷ್ಕರಿಸಲು ಸಲಹೆ ನೀಡಿದ್ದಾರೆ.
ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ನೆರವು ಒದಗಿಸುವ ಮಾರ್ಗಸೂಚಿ ಪರಿಷ್ಕರಿಸಿ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಬೇಕೆಂದು ಹೇಳಿದ್ದಾರೆ.