ಮೈಸೂರು: ಭಾರಿ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ನೆರೆಹಾವಳಿ ಉಂಟಾದ ಹಿನ್ನೆಲೆಯಲ್ಲಿ ಇನ್ನು ಎರಡು ಮೂರು ದಿನದಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನೆರೆ ಹಾನಿ ಉಂಟಾದ ಜಿಲ್ಲಾಧಿಕಾರಿಗಳ ಜೊತೆ ಮಾತಾಡಿ ಮಾಹಿತಿ ಪಡೆದುಕೊಂಡಿದ್ದೇನೆ. ಪರಿಸ್ಥಿತಿ ನಿರ್ವಹಣೆಗೆ ಅಗತ್ಯ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕೆಲವು ಸಚಿವರು ನೆರೆ ಹಾನಿ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಕೆಲವು ಸಚಿವರು ಪರಿಶೀಲನೆ ನಡೆಸಲಿದ್ದಾರೆ. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಬೇರೆ ಕಾರ್ಯದಲ್ಲಿ ಇದ್ದರು. ಅವರು ಕೂಡ ಪರಿಶೀಲನೆಗೆ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.
ಜನರ ಜೊತೆಗೆ ಸರ್ಕಾರ ಇದೆ. ಮನೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಲಾಗುವುದು. ಕೆಲವು ಸಚಿವರು ಜಿಲ್ಲಾ ಪ್ರವಾಸದಲ್ಲಿದ್ದಾರೆ. ನಾನು ಇನ್ನೆರಡು ದಿನದಲ್ಲಿ ಪ್ರವಾಸಕ್ಕೆ ತೆರಳುತ್ತೇನೆ ಎಂದು ಹೇಳಿದ್ದಾರೆ.