alex Certify 43 ತಾಲೂಕು ಪ್ರವಾಹ ಪೀಡಿತ: ಸರ್ಕಾರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

43 ತಾಲೂಕು ಪ್ರವಾಹ ಪೀಡಿತ: ಸರ್ಕಾರ ಘೋಷಣೆ

ಬೆಂಗಳೂರು: ಅತಿವೃಷ್ಟಿ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಮನೆ ಹಾನಿ, ಬೆಳೆ ಹಾನಿ ಹಾಗೂ ಮೂಲಭೂತ ಸೌಕರ್ಯಗಳು ಹಾನಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ 16 ಜಿಲ್ಲೆಗಳ 43 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ಧಾರವಾಡ ಜಿಲ್ಲೆಯ ಅಣ್ಣಿಗೇರಿ, ಹಾವೇರಿ ಜಿಲ್ಲೆಯ ಬ್ಯಾಡಗಿ, ಸವಣೂರು, ವಿಜಯಪುರ ಜಿಲ್ಲೆಯ ವಿಜಯಪುರ, ಬಸವನಬಾಗೇವಾಡಿ, ತಾಳಿಕೋಟೆ, ಇಂಡಿ, ಸಿಂದಗಿ, ದೇವರ ಹಿಪ್ಪರಗಿ ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ, ಜಗಳೂರು, ಗದಗ ಜಿಲ್ಲೆಯ ಗಜೇಂದ್ರಗಡ, ಗದಗ, ಲಕ್ಷ್ಮೇಶ್ವರ, ರಾಯಚೂರು ಜಿಲ್ಲೆಯ ಮಸ್ಕಿ, ಶ್ರೀವಾರ. ಚಿಕ್ಕಮಗಳೂರು ಜಿಲ್ಲೆಯ ಕಡೂರು, ಅಜ್ಜಂಪುರ, ಕಲಬುರ್ಗಿ ಜಿಲ್ಲೆಯ ಚಿಂಚೋಳಿ, ಯಡ್ರಾವಿ, ಮೈಸೂರು ಜಿಲ್ಲೆಯ ನಂಜನಗೂಡು, ಹೆಚ್.ಡಿ. ಕೋಟೆ, ಸರಗೂರು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ, ಮೊಳಕಾಲ್ಮೂರು, ಉತ್ತರಕನ್ನಡ ಜಿಲ್ಲೆಯ ಹಳಿಯಾಳ, ದಾಂಡೇಲಿ, ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕೂಡ್ಲಿಗಿ, ಸಂಡೂರು ತಾಲೂಕುಗಳನ್ನು ಅತಿವೃಷ್ಟಿ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ.

ಕೊಪ್ಪಳ ಜಿಲ್ಲೆಯ ಕನಕಗಿರಿ, ಕುಷ್ಟಗಿ, ಯಲಬುರ್ಗಾ, ಕುಕನೂರು, ತುಮಕೂರು ಜಿಲ್ಲೆಯ ಮಧುಗಿರಿ, ಬೀದರ್ ಜಿಲ್ಲೆಯ ಚಿಟಗುಪ್ಪ, ಹುಲಸೂರು, ಕಮಲಾನಗರ, ಹಾಸನ ಜಿಲ್ಲೆಯ ಹೊಳೆನರಸಿಪುರ ಸೇರಿದಂತೆ 43 ತಾಲೂಕುಗಳನ್ನು ಅತಿವೃಷ್ಟಿ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...