ಕರ್ನಾಟಕದ ವಿವಿಧ ಭಾಗದಲ್ಲಿ ಸುರಿದ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರವಾಹದಿಂದ ಬಾಧಿತರಾದ ಕರ್ನಾಟಕದ ಸಹೋದರಿಯರು, ಸಹೋದರರೊಂದಿಗೆ ನಾವು ಜೊತೆಯಾಗಿ ನಿಲ್ಲುತ್ತೇವೆ. ಪ್ರಗತಿಯಲ್ಲಿರುವ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೇಂದ್ರದಿಂದ ಎಲ್ಲಾ ಅಗತ್ಯ ನೆರವು ಬೆಂಬಲ ಭರವಸೆ ನೀಡಲಾಗಿದೆ ಎಂದು ಮೋದಿ ಹೇಳಿದ್ದಾರೆ.
ಉತ್ತರ ಕರ್ನಾಟಕ ಭಾಗದ ಅನೇಕ ಜಿಲ್ಲೆಗಳಲ್ಲಿ ನೆರೆಹಾವಳಿಯಿಂದ ಭಾರಿ ಪ್ರಮಾಣದ ಹಾನಿಯಾಗಿದ್ದು ಅಪಾರ ಸಂಖ್ಯೆಯ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದು, ಅವರೂ 2 -3 ದಿನ ಪರಿಶೀಲನೆ ನಡೆಸಲಿದ್ದಾರೆ.