ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅನೇಕ ಗ್ರಾಮಗಳಿಗೆ ನೀರು ನುಗ್ಗಿ ಮನೆಗಳು ಕುಸಿದು ಬಿದ್ದು, ಜಮೀನುಗಳು ಜಲಾವೃತಗೊಂಡಿವೆ. ಪರಿಸ್ಥಿತಿ ನಿರ್ವಹಣೆಗೆ ಸರ್ಕಾರದಿಂದ ಅಗತ್ಯವಾದ ಅನುದಾನ ಬಿಡುಗಡೆ ಮಾಡಲಾಗಿದೆ. ಇವತ್ತು ಕಂದಾಯ ಸಚಿವ ಆರ್.ಅಶೋಕ್ ಕಲ್ಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆರೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು, ರಾಜ್ಯದ ಅನೇಕ ಭಾಗದಲ್ಲಿ ವಾಡಿಕೆಗಿಂತ ಭಾರಿ ಮಳೆಯಾಗಿದೆ. ಪ್ರವಾಹ ಪರಿಸ್ಥಿತಿ ಎದುರಾಗಿದ್ದು ನಿರ್ವಹಣೆಗೆ ಅಗತ್ಯವಾದ ಅನುದಾನವನ್ನು ಜಿಲ್ಲಾಧಿಕಾರಿಗಳ ಖಾತೆಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.