ಬೆಂಗಳೂರು: ಪ್ರವಾಹದಿಂದ ಹಾನಿಗೀಡಾದವರಿಗೆ ತಕ್ಷಣಕ್ಕೆ 10,000 ರೂ. ಪರಿಹಾರ ನೀಡಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.
ನೆರೆಯಿಂದಾಗಿ ಬಟ್ಟೆ ಬರೆ ಕಳೆದುಕೊಂಡವರಿಗೆ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಶೇಕಡ 75 ರಷ್ಟು ಭಾಗ ಮನೆ ಹಾನಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆ ನೆರೆ ಹಾನಿಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಸಂದರ್ಭದಲ್ಲಿ ಪ್ರವಾಹದಿಂದ ಹಾನಿಗೊಳಗಾದವರಿಗೆ ಪರಿಹಾರ ನಿಗದಿ ಮಾಡಲಾಗಿದೆ. ನೆರೆಯಿಂದಾಗಿ ಬಟ್ಟೆಬರೆ ಕಳೆದುಕೊಂಡವರಿಗೆ 10 ಸಾವಿರ ರೂ., ಶೇಕಡ 75ರಷ್ಟು ಭಾಗ ಮನೆ ಹಾನಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದೆ. ಈ ಕುರಿತಾಗಿ ಸಿಎಂ ಯಡಿಯೂರಪ್ಪ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆನ್ನಲಾಗಿದೆ.