
ಬೆಂಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಸೇರಿದಂತೆ ಹಲವು ಜನಪ್ರತಿನಿಧಿಗಳಿಗೆ ಕೊರೊನಾ ಸೋಂಕು ತಗುಲಿದ್ದು ಅನೇಕರು ಗುಣಮುಖರಾಗಿದ್ದಾರೆ.
ಈಗ ಅರಣ್ಯ ಖಾತೆ ಸಚಿವ ಆನಂದ್ ಸಿಂಗ್ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಜುಲೈ 24 ರಂದು ಕೋವಿಡ್ ಟೆಸ್ಟ್ ಮಾಡಿಸಲಾಗಿದ್ದು ನಿನ್ನೆ ರಾತ್ರಿ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಿವಾಸದಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗಿದೆ. ಆನಂದ್ ಸಿಂಗ್ ಅವರಿಗೆ ಕೊರೊನಾ ಸೋಂಕು ತಗುಲಿದ್ದರೂ ಅವರಿಗೆ ಯಾವುದೇ ರೋಗ ಲಕ್ಷಣ ಕಂಡು ಬಂದಿಲ್ಲ ಎಂದು ಹೇಳಲಾಗಿದೆ.