ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ತುಮಕೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದು, ಬಿಜೆಪಿಯ ಬಸವರಾಜ್ ವಿರುದ್ಧ ಪರಾಭವಗೊಂಡಿದ್ದರು. ಇದೀಗ ದೇವೇಗೌಡರು ಮತ್ತೊಮ್ಮೆ ಸಂಸತ್ ಪ್ರವೇಶಿಸಲು ವೇದಿಕೆ ಸಜ್ಜಾಗಿದೆ.
ಹೌದು, ರಾಜ್ಯಸಭಾ ಚುನಾವಣೆಗೆ ದೇವೇಗೌಡರು ಕಣಕ್ಕಿಳಿಯಲಿದ್ದು, ಕಾಂಗ್ರೆಸ್ ದೇವೇಗೌಡರನ್ನು ಬೆಂಬಲಿಸಲಿದೆ. ಹೀಗಾಗಿ ಅವರ ಗೆಲುವು ಸುಲಭವಾಗಲಿದ್ದು, ಜೊತೆಗೆ ಬಿಜೆಪಿ ತನ್ನ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ತೀರ್ಮಾನಿಸಿರುವುದರಿಂದ ಬಹುತೇಕ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.
ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಯನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಘೋಷಿಸಿದ್ದು ಇಂದು ಅವರು ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ದೇವೇಗೌಡರು ನಾಳೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದ್ದು, 87 ವರ್ಷದ ದೇವೇಗೌಡರು ರಾಜ್ಯಸಭೆಗೆ ಆಯ್ಕೆಯಾಗುವ ಮೂಲಕ ಸಂಸತ್ ಪ್ರವೇಶಿಸುವುದು ನಿಶ್ಚಿತವಾಗಿದೆ.