ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋರೋನಾ ಸೋಂಕಿನಿಂದ ಮೃತಪಟ್ಟ ಮಹಿಳೆ ಅಂತ್ಯಸಂಸ್ಕಾರಕ್ಕೆ ವಿರೋಧ ವ್ಯಕ್ತವಾಗಿದ್ದು, ವಿರೋಧದ ನಡುವೆಯೂ ಬಂಟ್ವಾಳ ತಾಲೂಕಿನ ಬಿಸಿ ರೋಡ್ ಕೈಕಂಬ ಬಳಿ ತಾಲೂಕು ಆಡಳಿತ ಅಂತ್ಯಸಂಸ್ಕಾರ ನೆರವೇರಿಸಿದೆ.
ಕೊರೋನಾ ಸೋಂಕಿನಿಂದ ಬಂಟ್ವಾಳದ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಭಾನುವಾರ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರವನ್ನು ನಂದಿಗುಡ್ಡೆ ವಿದ್ಯುತ್ ಚಿತಾಗಾರದಲ್ಲಿ ನೆರವೇರಿಸಲಾಗಿದೆ.
ಗುರುವಾರ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೈಕಂಬ ರುದ್ರಭೂಮಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.