ಧಾರವಾಡ: ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಮೊದಲು ಮೈ ತೊಳೆಯುವ ಸಂದರ್ಭದಲ್ಲಿ ನೀರು ಕುಡಿದಿರುವುದಾಗಿ ಭಾವಿಸಿದ ಸಂಬಂಧಿಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಧಾರವಾಡ ತಾಲೂಕಿನ ಹೆಬ್ಬಳ್ಳಿಯ ಸುರೇಶೆಟ್ಟಿಕೊಪ್ಪ ಶಾಲೆಯ ಶಿಕ್ಷಕ ಈರಣ್ಣ ಹೃದಯಾಘಾತದಿಂದ ಶುಕ್ರವಾರ ಬೆಳಗ್ಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಸ್ವಗ್ರಾಮಕ್ಕೆ ತಂದು ಸ್ನಾನ ಮಾಡಿಸುವ ಸಂದರ್ಭದಲ್ಲಿ ಮೃತವ್ಯಕ್ತಿ ನೀರು ಕುಡಿದಿರುವುದಾಗಿ ಸಂಬಂಧಿಕರು ತಪ್ಪಾಗಿ ಭಾವಿಸಿದ್ದಾರೆ.
ಕೂಡಲೇ ಮೃತದೇಹ ತೆಗೆದುಕೊಂಡು ಜಿಲ್ಲಾಸ್ಪತ್ರೆಗೆ ಧಾವಿಸಿದ್ದಾರೆ. ಪರೀಕ್ಷಿಸಿದ ವೈದ್ಯರು ಈಗಾಗಲೇ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಬಳಿಕ ಗ್ರಾಮಕ್ಕೆ ಮೃತದೇಹ ಕೊಂಡೊಯ್ದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.