
ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಅವರ ಪತ್ನಿ ಸರ್ಕಾರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿ 4 ದಿನಗಳ ಹಿಂದೆ ತಪಾಸಣೆಗೆ ಒಳಗಾಗಿದ್ದ ಅವರಿಗೆ ಶನಿವಾರ ಹೆರಿಗೆ ನೋವು ಕಾಣಿಸಿಕೊಂಡಿದೆ. ಭಾನುವಾರ ಬೆಳಗಿನ ಜಾವ ಸಿಸೇರಿಯನ್ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ,ಮಗು ಆರೋಗ್ಯವಾಗಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಜಿಲ್ಲಾಧಿಕಾರಿ ಅವರ ಸರಳತೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.