ಕೊಪ್ಪಳ: ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹಣ ಪಡೆದು ಜನರನ್ನು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಕುಷ್ಟಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಗಂಗಾ ಕುಲಕರ್ಣಿ, ಕೋರ್ಟ್ ಆವರಣದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಗಂಗಾ ಕುಲಕರ್ಣಿ ಕೋರ್ಣಗೆ ಹಾಜರಾಗುವುದಕ್ಕೂ ಮೊದಲೇ ವಿಷ ಸೇವಿಸಿ ಬಂದಿದ್ದರು ಎನ್ನಲಾಗಿದೆ. ವಿಷ ಕುಡಿದು ಬಂದಿದ್ದ ಗಂಗಾ ಕುಲಕರ್ಣಿ ಕೋರ್ಟ್ ಆವರಣದಲ್ಲೇ ಕುಸಿದು ಬಿದ್ದಿದ್ದಾರೆ.