ಕಲಬುರಗಿ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಾಡೋಜ ಗೀತಾ ನಾಗಭೂಷಣ ಕಲಬುರ್ಗಿಯದಲ್ಲಿ ನಿಧನರಾಗಿದ್ದಾರೆ.
2010 ರಲ್ಲಿ ಗದಗದಲ್ಲಿ ನಡೆದ 76ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಗೀತಾ ನಾಗಭೂಷಣ ಹಲವಾರು ಕಥೆ, ಕಾದಂಬರಿ ರಚಿಸಿದ್ದು, ಅವರ ಕಾದಂಬರಿಗಳು ಚಲನಚಿತ್ರಗಳಾಗಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಲಬುರ್ಗಿಯ ಸ್ವಸ್ತಿಕ್ ನಗರದಲ್ಲಿರುವ ನಿವಾಸದಲ್ಲಿ ಅಸ್ವಸ್ಥರಾದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸೋಮವಾರ ಅಂತ್ಯಕ್ರಿಯೆ ನೆರವೇರಲಿದೆ. 1942ರ ಮಾರ್ಚ್ 25ರಂದು ಸಾವಳಗಿ ಗ್ರಾಮದಲ್ಲಿ ಜನಿಸಿದ ಗೀತಾ ನಾಗಭೂಷಣ ಎಂಎ ಪದವಿ ಪೂರ್ಣಗೊಳಿಸಿ 30 ವರ್ಷ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.