ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆಯೇ ಬಸ್ ಪ್ರಯಾಣ ದರವನ್ನೂ ಹೆಚ್ಚಳ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿತ್ತು. ಆದರೆ ಈಗ ಈ ನಿರ್ಧಾರದಿಂದ ಹಿಂದೆ ಸರಿದಿದೆ.
ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ತಡೆಯೊಡ್ಡಿದೆ. ಈಗಗಾಲೇ ಬೆಲೆ ಏರಿಕೆ ಬಿಸಿಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಇದರ ಜೊತೆಗೆ ಬಿಎಂಟಿಸಿ ಬಸ್ ಪ್ರಯಾಣ ದರವನ್ನೂ ಹೆಚ್ಚಿಸಿದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿದೆ. ಹಾಗಾಗಿ ಸದ್ಯಕ್ಕೆ ಬಸ್ ಪ್ರಯಾಣ ದರ ಹೆಚ್ಚಳ ಮಾಡದಂತೆ ಸಾರಿಗೆ ಸಚಿವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ ಎನ್ನಲಾಗಿದೆ.
ಸೋಲಾರ್ ಬ್ಯಾಟರಿ ಚಾಲಿತ ವಾಹನ ಅನ್ವೇಷಿಸಿದ ರೈತ
ಶೇ.18ರಿಂದ 20ರಷ್ಟು ದರ ಹೆಚ್ಚಳ ಕೋರಿ ಬಿಎಂಟಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.