ಬೆಂಗಳೂರು: ಕೊರೊನಾ ಸೋಂಕಿನ ನಡುವೆಯೇ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದ್ದು, ಕೊರೊನಾದಿಂದ ಗುಣಮುಖರಾಗುತ್ತಿರುವವರಲ್ಲಿ ಈ ಶಿಲಿಂದ್ರ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಹಲವರನ್ನು ಬಲಿ ಪಡೆಯುತ್ತಿದೆ. ಈ ನಡುವೆ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಔಷಧ ಕೊರತೆ ಎದುರಾಗಿತ್ತು. ಇದೀಗ ಸೋಂಕಿತರ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಇಂಜಕ್ಷನ್ ಹಂಚಿಕೆ ಮಾಡಿದೆ.
ಈ ಬಗ್ಗೆ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಮಾಹಿತಿ ನೀಡಿದ್ದು, ಕರ್ನಾಟಕಕ್ಕೆ ಬ್ಲ್ಯಾಕ್ ಫಂಗಸ್ ಗೆ ಇಂಜಕ್ಷನ್ ಹಂಚಿಕೆ ಮಾಡಲಾಗಿದೆ. ಆಂಫೊಟೆರಿಸಿನ್ ಬಿ 1,270 ವಯಲ್ಸ್ ಗಳನ್ನು ರಾಜ್ಯಕ್ಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ʼಕೊರೊನಾʼ ನಿಯಂತ್ರಣಕ್ಕೆ ಸರ್ಕಾರದಿಂದ ಮಹತ್ವದ ಸೂಚನೆ
ದೇಶಾದ್ಯಂತ ಈವರೆಗೆ 8,840 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಕರ್ನಾಟಕದಲ್ಲಿಯೇ 500 ಕೇಸ್ ಪತ್ತೆಯಾಗಿದೆ. ಬ್ಲ್ಯಾಕ್ ಫಂಗಸ್ ಕೇಸ್ ಹೆಚ್ಚಿರುವ ರಾಜ್ಯಗಳಿಗೆ ಹೆಚ್ಚು ವಯಲ್ಸ್ ಹಂಚಿಕೆ ಮಾಡಲಾಗಿದ್ದು, ಗುಜರಾತ್ ಗೆ 5,800, ಮಹಾರಾಷ್ಟ್ರಕ್ಕೆ 5090 ವಯಲ್ಸ್ ಹಂಚಿಕೆ ಮಾಡಲಾಗಿದೆ. ದೇಶದ ವಿವಿಧ ರಾಜ್ಯಗಳಿಗೆ ಒಟ್ಟು 23,680 ವಯಲ್ಸ್ ಹಂಚಿಕೆ ಮಾಡಲಾಗಿದೆ ಎಂದು ವಿವರಿಸಿದರು.