ಬೆಂಗಳೂರು: ಖಾಸಗಿ ಶಾಲೆಗಳು ಶೇ.30ರಷ್ಟು ಶುಲ್ಕ ಕಡಿತಗೊಳಿಸುವಂತೆ ಪ್ರಾಥಮಿಕ, ಪ್ರೌಢ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.
ಇಲಾಖೆ ಅಧೀನ ಕಾರ್ಯದರ್ಶಿ ಹೆಚ್.ಎಸ್.ಶಿವಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದು, ಬೋಧನಾ ಶುಲ್ಕದ ಶೇ.70ರಷ್ಟು ಮಾತ್ರ ಪಡೆಯಲು ಅನುಮತಿ ನೀಡಲಾಗಿದೆ. ಶಾಲಾ ಅಭಿವೃದ್ಧಿ ಶುಲ್ಕ, ಐಚ್ಚಿಕ ಶುಲ್ಕ, ಟ್ರಸ್ಟ್, ಸೊಸೈಟಿ ಸೇರಿದಂತೆ ಉಳಿದಂತೆ ಯಾವುದೇ ಶುಲ್ಕ ಪಡೆಯದಂತೆ ಆದೇಶದಲ್ಲಿ ತಿಳಿಸಲಾಗಿದೆ.
ಮೋದಿ ಹೂಡಿಕೆ ಮಾಡಿರುವ ಅಂಚೆ ಕಚೇರಿಯ ಈ ಯೋಜನೆಯಲ್ಲಿ ಸಿಗುತ್ತೆ ʼಬಂಪರ್ʼ ರಿಟರ್ನ್
ಈಗಾಗಲೇ ಪೂರ್ಣ ಶುಲ್ಕ ಪಾವತಿಸಿದಲ್ಲಿ ಹೆಚ್ಚುವರಿ ಶುಲ್ಕವನ್ನು ಮುಂದಿನ ವರ್ಷಕ್ಕೆ ಕಾಯ್ದುಕೊಳ್ಳುವಂತೆಯೂ ಸೂಚಿಸಲಾಗಿದೆ.