ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರೈತರು ಹೆಚ್ಚು ಸಾವಯವ ಕೃಷಿಯತ್ತ ಆಸಕ್ತಿ ಹೊಂದುತ್ತಿದ್ದಾರೆ. ಆರೋಗ್ಯದ ದೃಷ್ಟಿಯಿಂದಲೂ ಸಾವಯವ ಆಹಾರ ಪದಾರ್ಥಗಳಿಗೆ ಮಹತ್ವ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಾವಯವ ಕೃಷಿಗೆ ಪ್ರಾಧಾನ್ಯತೆ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಗುಜರಾತ್ ಮಾದರಿಯ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಸಾವಯವ ಕೃಷಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಗುಜರಾತ್ ಹಾಗೂ ಛತ್ತೀಸ್ ಗಢದಲ್ಲಿ ಸಾವಯವ ಕೃಷಿ ವಿಶ್ವವಿದ್ಯಾಲಯವಿದ್ದು, ಅದೇ ಮಾದರಿಯಲ್ಲಿ ರಾಜ್ಯದ ಶಿವಮೊಗ್ಗ ಜಿಲ್ಲೆಯಲ್ಲಿಯೂ ಸಾವಯವ ಕೃಷಿ ವಿಶ್ವ ವಿದ್ಯಾಲಯ ನಿರ್ಮಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಬಗ್ಗೆ ಸಮಿತಿ ಸದಸ್ಯರು ತಮ್ಮ ಅಭಿಪ್ರಾಯ ತಿಳಿಸಿದ್ದು, ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
BIG NEWS: ಕೊರೊನಾ ವೈರಸ್ ಮೂಲ ಕೊನೆಗೂ ಪತ್ತೆ….!
ಹೆಚ್ಚು ಹೆಚ್ಚು ರಾಸಾಯನಿಕ ಗೊಬ್ಬರಗಳನ್ನು ಬಳಸುವುದು ಭೂಮಿಗೆ ವಿಷ ನೀಡಿದಂತೆ. ಇದರಿಂದ ಭೂಮಿಯಲ್ಲಿರುವ ಪೋಷಕಾಂಶಗಳು ಕಡಿಮೆಯಾಗುತ್ತದೆ. ರೈತನ ಆರೋಗ್ಯಕ್ಕೂ ಹಾನಿಕರ. ಹೀಗಾಗಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡುವುದು ಅಗತ್ಯ. ಸಿರಿಧಾನ್ಯ ಹಾಗೂ ಸಾವಯವ ಪದಾರ್ಥಗಳ ಸಂಸ್ಕರಣೆ ಮಾರುಕಟ್ಟೆ ವಿಸ್ತರಣೆ ಬಗ್ಗೆಯೂ ಒತ್ತು ನೀಡಲಾಗುವುದು ಎಂದು ಸಚಿವರು ತಿಳಿಸಿದರು.