alex Certify GOOD NEWS: ಸೋಂಕಿತರಿಗೆ ರೆಮ್ ಡಿಸಿವಿರ್ ಹಂಚಿಕೆ; ಸರ್ಕಾರದಿಂದಲೇ ಬರಲಿದೆ SMS | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಸೋಂಕಿತರಿಗೆ ರೆಮ್ ಡಿಸಿವಿರ್ ಹಂಚಿಕೆ; ಸರ್ಕಾರದಿಂದಲೇ ಬರಲಿದೆ SMS

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ರೆಮ್ ಡಿಸಿವಿರ್ ಗೆ ಬೇಡಿಕೆ ಹೆಚ್ಚಾಗಿದೆ. ಈ ನಡುವೆ ಕಾಳಸಂತೆಯಲ್ಲಿ ಈ ಔಷಧ ಮಾರಾಟಗಾರರ ಹಾವಳಿಯೂ ಯಥೇಚ್ಛವಾಗಿ ಸಾಗಿದೆ.

ಇದೀಗ ರೆಮ್ ಡಿಸಿವಿರ್ ಕಾಳೆದಂಧೆಕೋರರಿಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ ರೆಮ್ ಡಿಸಿವಿರ್ ಹಂಚಿಕೆಯಾಗುತ್ತಿದ್ದಂತೆ ನೇರವಾಗಿ ಎಸ್ಎಂಎಸ್ ಮೂಲಕ ಸಂದೇಶ ಬರುವಂತೆ ಮಾಡಿದೆ.

ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದು, ರೆಮ್ ಡೆಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದ್ದು ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು SMS ಕಳುಹಿಸಲಾಗುತ್ತದೆ.

ಸಾರ್ವಜನಿಕರು ಈ https://covidwar.karnataka.gov.in/service2 ಲಿಂಕ್ ಮೂಲಕ ತಮಗೆ ಹಂಚಿಕೆಯಾಗಿರುವ ಔಷಧದ ಬಗ್ಗೆ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.

ಅಲ್ಲದೇ ಒಂದು ವೇಳೆ ಸೋಂಕಿತ ವ್ಯಕ್ತಿಯ SRF IDಗೆ ರೆಮ್ ಡಿಸಿವಿರ್ ಔಷಧ ಹಂಚಿಕೆಯಾಗಿ ಆಸ್ಪತ್ರೆ ಅದನ್ನು ಆ ವ್ಯಕ್ತಿಯ ಚಿಕಿತ್ಸೆಗೆ ಒದಗಿಸದಿದ್ದಲ್ಲಿ ಇದೇ ಲಿಂಕ್ ಮೂಲಕ ಸರ್ಕಾರಕ್ಕೆ ವರದಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಮೂಲಕ ಕಾಳಸಂತೆ ಮಾರಾಟಕ್ಕೆ ಕಡಿವಾಣ ಹಾಕೋಣ ಎಂದು ಕರೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...