ಕಾರ್ಕಳ: ಈಗಾಗಲೇ 6000 ಪೊಲೀಸ್ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದ್ದು, ಮುಂದಿನ ಮೂರು ವರ್ಷಗಳಲ್ಲಿ 16,000 ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಕಾರ್ಕಳದಲ್ಲಿ ಮಾತನಾಡಿದ ಅವರು, ಒಟ್ಟು 16 ಸಾವಿರ ಪೊಲೀಸ್ ಹುದ್ದೆ ಗಳನ್ನು ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಪೊಲೀಸ್ ಬಲ ಮತ್ತಷ್ಟು ಹೆಚ್ಚಲಿದೆ. ಈಗಿರುವ ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿದೆ. ಮಧ್ಯಸ್ಥಿಕೆ ಇಲ್ಲದ ರೀತಿ ನೇಮಕಾತಿ ಪ್ರಕ್ರಿಯೆ ಮಾಡಲಾಗುತ್ತಿದೆ ಎಂದು ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎದುರಾಯ್ತು ಸಂಕಷ್ಟ
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಪೊಲೀಸ್ ಇಲಾಖೆಗೆ ಇದೊಂದು ಸವಾಲಿನ ವಿಚಾರ. ಈ ಅಪರಾಧ ಮಟ್ಟ ಹಾಕುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಒಂದೊಂದು ಸೈಬರ್ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು ಎಂದರು.
ಇದೇ ವೇಳೆ ರಾಜ್ಯ ಪೊಲೀಸ್ ಇಲಾಖೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಗೃಹ ಸಚಿವರು, ಡಾರ್ಕ್ ವೆಬ್ ಮೂಲಕ ಜನರನ್ನು ಸಂಪರ್ಕಿಸಿ ಡ್ರಗ್ ಪೂರೈಕೆ ಮಾಡುತ್ತಿದ್ದ ಅಂತರಾಷ್ಟ್ರೀಯ ಜಾಲವನ್ನು ದೇಶದಲ್ಲಿ ಮೊಟ್ಟ ಮೊದಲು ಮಟ್ಟ ಹಾಕಿದ್ದು ಕರ್ನಾಟಕ ಪೊಲೀಸ್ ಎಂಬುದು ಹೆಮ್ಮೆಯ ವಿಚಾರ ಎಂದು ಹೇಳಿದರು.