ದೆಹಲಿಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ಒಂದು ಲಕ್ಷಕ್ಕಿಂತ ಹೆಚ್ಚಿದೆ. ಆದರೆ ರಾಷ್ಟ್ರ ರಾಜಧಾನಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಕೊರೊನಾ ವೈರಸ್‌ನ ಅತಿ ಹೆಚ್ಚಿರುವ ದೆಹಲಿಯಲ್ಲಿ ಕಳೆದ ಒಂದು ವಾರದಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಕ್ಷೀಣಿಸುತ್ತಿದೆ. ಇದು ದೆಹಲಿ ಜನರಿಗೆ ಸ್ವಲ್ಪ ನೆಮ್ಮದಿ ನೀಡಿದೆ.
ಜುಲೈ 3 ರಂದು ದೆಹಲಿಯಲ್ಲಿ 26,304 ಸಕ್ರಿಯ ಪ್ರಕರಣಗಳಿದ್ದವು. ಜುಲೈ 10 ರ ಬೆಳಿಗ್ಗೆ ಶೇಕಡಾ 18 ರಷ್ಟು ಕುಸಿತ ಕಂಡು 21,567 ಸಕ್ರಿಯ ಪ್ರಕರಣವಿದೆ. ವಿಶೇಷವೆಂದರೆ ಇದೇ ಅವಧಿಯಲ್ಲಿ ರಾಷ್ಟ್ರಮಟ್ಟದ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇಕಡಾ 21.7 ರಷ್ಟು ಹೆಚ್ಚಾಗಿದೆ. ಒಂದು ವಾರದ ಹಿಂದಿನ ಅವಧಿಗೆ ಹೋಲಿಸಿದರೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಸುಮಾರು 50 ಸಾವಿರ ಹೆಚ್ಚಾಗಿದೆ.
ದೆಹಲಿಯ ಹೊರತಾಗಿ, ಹರಿಯಾಣ ಮತ್ತು ತಮಿಳುನಾಡಿನಲ್ಲೂ ಪರಿಸ್ಥಿತಿ ಸುಧಾರಿಸಿದೆ. ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕರ್ನಾಟಕದಲ್ಲಿ ಸಕ್ರಿಯ ಪ್ರಕರಣಗಳು ಶೇಕಡಾ 89 ರಷ್ಟು ಹೆಚ್ಚಾಗಿದೆ. ಇದು ಪ್ರಮುಖ ರಾಜ್ಯಗಳಲ್ಲಿ ಅತಿದೊಡ್ಡ ಹೆಚ್ಚಳವಾಗಿದೆ.