ಬೆಂಗಳೂರು: ಲೀಸ್ ಆಸ್ತಿ ಮಾರಾಟಕ್ಕೆ ಸರ್ಕಾರ ಮುಂದಾಗಿದೆ. ಕೊರೋನಾ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂತಹ ವಿವಾದಿತ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.
ಸಿಎಂ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಶೈಕ್ಷಣಿಕ, ಧಾರ್ಮಿಕ, ಕೈಗಾರಿಕೆ ಉದ್ದೇಶ ಹಾಗೂ ಖಾಸಗಿ ಸಂಘ-ಸಂಸ್ಥೆಗಳಿಗೆ ಗುತ್ತಿಗೆ ಆಧಾರದಲ್ಲಿ ನೀಡಿರುವ ಸರ್ಕಾರಿ ಜಾಗವನ್ನು ಸಂಬಂಧಪಟ್ಟವರು ಖರೀದಿಸಲು ಅವಕಾಶ ಕಲ್ಪಿಸುವ ತೀರ್ಮಾನ ಕೈಗೊಳ್ಳಲಾಗಿದೆ.
ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಸರ್ಕಾರ ಇಂತಹ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.
ಈ ಕುರಿತಾಗಿ ಮಾತನಾಡಿದ ಸಚಿವ ಮಾಧುಸ್ವಾಮಿ, ಗುತ್ತಿಗೆ ಪಡೆದಿರುವ ಖಾಸಗಿ ಸಂಘ ಸಂಸ್ಥೆಗಳಿಗೆ ಭೂಮಿಯನ್ನು ಖರೀದಿಗೆ ಕೊಡಲು ನಿರ್ಧರಿಸಲಾಗಿದೆ. ಮಾರುಕಟ್ಟೆ ದರಕ್ಕೆ ಲೀಸ್ ಪಡೆದಿರುವವರಿಗೆ ಭೂಮಿ ಮಾರಾಟ ಮಾಡಲಾಗುವುದು ಎಂದು ಹೇಳಿದ್ದಾರೆ.